ಹುಬ್ಬಳ್ಳಿ: ಹಾಡಹಗಲೇ ವ್ಯಕ್ತಿಯ ಭೀಕರ ಕೊಲೆ, ಬೆಚ್ಚಿಬಿದ್ದ ವಾಣಿಜ್ಯ ನಗರಿ
ಹುಬ್ಬಳ್ಳಿಯಲ್ಲಿ ಹಾಡಹಗಲೇ ತಲವಾರಿನಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

Published : August 28, 2026 at 7:13 PM IST
ಹುಬ್ಬಳ್ಳಿ: ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲಿಯೇ ತಲವಾರ್ ನಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಹುಬ್ಬಳ್ಳಿಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇಬ್ಬರು ಯುವಕರು ವ್ಯಕ್ತಿಯನ್ನು ಬೆನ್ನಟ್ಟಿಕೊಂಡು ಬಂದು, ದಾಳಿ ನಡೆಸಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಕಮಿಷನರ್ ಎನ್.ಶಶಿಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಹತ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿಗಳ ಬಗ್ಗೆ ಹಾಗೂ ಹತ್ಯೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಭೀಕರ ದೃಶ್ಯ ಮೊಬೈಲ್ನಲ್ಲಿ ಸೆರೆ: ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಯುವಕರು ತಡೆದಿದ್ದಲ್ಲದೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಘಟನೆ ನೋಡಿದರೂ ಯಾರೊಬ್ಬರೂ ನೆರವಿಗೆ ಯತ್ನಿಸಲಿಲ್ಲ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಧಾರವಾಡ: ಪತ್ನಿ ಕೊಲೆ ಮಾಡಿ ಪ್ರಾಣ ಕಳೆದುಕೊಂಡ ಪತಿ

