ಕಾರವಾರ: ಪೋಕ್ಸೊ ಪ್ರಕರಣ, ಮಂಕಿ ಠಾಣೆ ಪಿಎಸ್‌ಐ ಅಭಿನಂದನ್ ಬಂಧನ
ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐವೊಬ್ಬರನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Published : July 5, 2026 at 4:21 PM IST
ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೇ ಪೋಕ್ಸೊ (POCSO) ಪ್ರಕರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅಭಿನಂದನ್ ಅವರನ್ನು ಪೋಕ್ಸೋ ಆರೋಪ ಪ್ರಕರಣದಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ: ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತೆಗೆ ಪಿಎಸ್‌ಐ ಅಭಿನಂದನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಸಂತ್ರಸ್ತ ಬಾಲಕಿಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದರು.
ಪೊಲೀಸ್ ಕಾರ್ಯಾಚರಣೆ: ಬಾಲಕಿ ನೀಡಿದ ದೂರಿನ ಅನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಭಟ್ಕಳ ನಗರ ಠಾಣೆಯ ಪೊಲೀಸರು, ಮಂಕಿ ಪಿಎಸ್‌ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆಯ ಬಳಿಕ ಬಂಧಿಸಿದ್ದಾರೆ.
ಕಾನೂನು ರಕ್ಷಣೆ ಮಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಗಂಭೀರ ಪ್ರಕರಣದಲ್ಲಿ ಬಂಧನವಾಗಿರುವುದು ಜಿಲ್ಲೆಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಕುರಿತು ಭಟ್ಕಳ ನಗರ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಬರ್ತ್ ಡೇ ಪಾರ್ಟಿಗೆ ಕರೆದು ಯುವತಿ ಮೇಲೆ ಅತ್ಯಾಚಾರ; ಐವರ ಬಂಧನ

