ETV Bharat / state

ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್​

ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರು​ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್​
ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್​ (ANI Video grab)
author img

By ETV Bharat Karnataka Team

Published : June 3, 2026 at 5:35 PM IST

1 Min Read
Choose ETV Bharat

ಬೆಂಗಳೂರು: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರು​ ಉಪಮುಖ್ಯಮಂತ್ರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಲೋಕ ಭವನದಲ್ಲಿಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಇದಕ್ಕೂ ಮೊದಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ಪರಮೇಶ್ವರ್​, 2018 ಮೇ ತಿಂಗಳಿಂದ ಜುಲೈ 2019ರವರೆಗೆ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು.

ಪ್ರಮುಖ ದಲಿತ ನಾಯಕರಾದ ಪರಮೇಶ್ವರ್​, 2010 ಮತ್ತು 2018ರ ನಡುವೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾಗಿ ದಾಖಲೆಯ ಸತತ ಎಂಟು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಕಾಂಗ್ರೆಸ್ ನಾಯಕರು, ಗಣ್ಯರು ಮತ್ತು ಆಹ್ವಾನಿತರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿವಿಧ ಮಠಗಳ ಮುಖ್ಯಸ್ಥರೂ ಸೇರಿದಂತೆ ಎಲ್ಲಾ ಪ್ರಮುಖ ಸಮುದಾಯಗಳ ಧಾರ್ಮಿಕ ಮುಖಂಡರೂ ಸಹ ಉಪಸ್ಥಿತರಿದ್ದರು.

ಇವುಗಳನ್ನೂ ಓದಿ: