ETV Bharat / state

ರಾಯಚೂರಲ್ಲಿ ಭೀಕರ ಅಪಘಾತ: ಮೂವರು ಯುವಕರು ಸಾವು

ರಾಯಚೂರಲ್ಲಿ ಬೈಕ್, ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಮೂವರು ಯುವಕರು ಮೃತಪಟ್ಟಿದ್ದಾರೆ.

BIKE AND TRUCK COLLISION  RAICHUR  BIKE TRUCK ACCIDENT  MYSURU COUPLE DIED RAICHUR ACCIDENT
ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ (ETV Bharat)
author img

By ETV Bharat Karnataka Team

Published : February 28, 2026 at 8:21 AM IST

2 Min Read
Choose ETV Bharat

ರಾಯಚೂರು: ನಗರದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಗರದ ಬಸವೇಶ್ವರ ವೃತ್ತದ ಬಳಿ ನಡೆದಿದೆ.

ಮಹ್ಮದ್ ಅಲಿ ಪಾಷಾ(24), ನೂರ್ ಮಹ್ಮದ್(19), ಫಯಾಜ್(26) ಮೃತ ಬೈಕ್ ಸವಾರರು. ಮೃತರೆಲ್ಲರೂ ನಗರದ ಗಾಂಧಿ ಚೌಕಿನ ಸುಖಾಣಿ ನಿವಾಸಿಗಳೆಂದು ತಿಳಿದು ಬಂದಿದೆ. ರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ರಕ್ ಚಾಲಕನ ನಿರ್ಲಕ್ಷ್ಯ ಆರೋಪ:

ಟ್ರಕ್ ಚಾಲಕ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಕೋರ್ಟ್ ರಸ್ತೆ ಕಡೆಯಿಂದ ಬಂದು ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರು ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರಿಮ್ಸ್ ರವಾನಿಸಿದ್ದಾರೆ. ಟ್ರಕ್ ಚಾಲಕ ಸಹಜೋರ್ ವಿರುದ್ಧ BNS–2023 ಕಲಂ 281 ಮತ್ತು 106(1) ಅಡಿಯಲ್ಲಿ ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟ್ರಕ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ದಂಪತಿ ಸಾವು

ಮೈಸೂರು: ಸಂಬಂಧಿಕರ ಅಂತ್ಯಕ್ರಿಯೆ ತೆರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಗಂಡ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿನ ಕೆ.ಆರ್.ನಗರದ ತಾಲೂಕಿನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಕೆ.ಆರ್.ನಗರ ತಾಲೂಕಿನ ಬೀರನಹಳ್ಳಿ ಗ್ರಾಮದ ನಂಜುಂಡಸೋಮಚಾರ್ (51) ಪತ್ನಿ ನೇತ್ರಾವತಿ(48) ಮೃತ ದಂಪತಿ. ಹಾಸನದಲ್ಲಿ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕ್​​ನಲ್ಲಿ ತೆರಳುತ್ತಿದ್ದ ವೇಳೆ ಕಗ್ಗರೆ ಬಳಿ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ , ಬೈಕ್‌ನಿಂದ ಕೆಳಗೆ ಬಿದ್ದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಕಾರಿನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ಸಂಬಂಧ ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ಸರಣಿ ಅಪಘಾತ: ಆರು ಜನರು ಸಾವು, ಹಲವರ ಸ್ಥಿತಿ ಗಂಭೀರ

ರಾಯಚೂರು: ಹೋಟೆಲ್​ಗೆ ನುಗ್ಗಿ ತಲೆಕೆಳಗಾಗಿ ನಿಂತ ಕಾರು - ವಿಡಿಯೋ