ETV Bharat / state

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SECOND PUC EXAM
ಸಾಂದರ್ಭಿಕ ಚಿತ್ರ (Getty Images)
author img

By ETV Bharat Karnataka Team

Published : February 27, 2026 at 8:33 PM IST

1 Min Read
Choose ETV Bharat

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಜ್ಜಾಗಿದೆ. ಮಾ.17ರವರೆಗೆ ಪರೀಕ್ಷೆ ನಡೆಯಲಿದೆ.

1,217 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645, ವಾಣಿಜ್ಯ 2,11,174 ಹಾಗೂ ಕಲಾ ವಿಭಾಗದಲ್ಲಿ 1,42, 982 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಎಲ್ಲ ಕೇಂದ್ರಗಳಲ್ಲಿ ಸಿಸಿ ಕಣ್ಗಾವಲು: ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವರೆಗೆ ನಿಷೇಧಿತ ಪ್ರದೇಶ ಘೋಷಿಸಲಾಗಿದೆ. ನಿಷೇಧಿತ ಸ್ಥಳಗಳಲ್ಲಿ ಜೆರಾಕ್ಸ್, ಸೈಬರ್ ಸೆಂಟರ್ ತೆರೆಯದಂತೆ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.

ಕಿಡಿಗೇಡಿಗಳ ವಿರುದ್ಧ ಹದ್ದಿಕಣ್ಣು: ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಮಾಹಿತಿ ಹಬ್ಬಿಸಿ ಅಥವಾ ವದಂತಿ ಮೂಲಕ ಕಿಡಿಗೇಡಿಗಳು ಆರ್ಥಿಕ ಲಾಭಕ್ಕೆ ಮಾಡಿಕೊಳ್ಳುವವರ ವಿರುದ್ಧ ಹದ್ದಿನ ಕಣ್ಣಿಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಕಂಡುಬಂದರೆ ಭಾರತೀಯ ನ್ಯಾಯ ಸಂಹಿತೆ ಹಾಗೂ ಶಿಕ್ಷಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್​, ಎಲೆಕ್ಟ್ರಾನಿಕ್​ ಉಪಕರಣ ತರುವುದಕ್ಕೆ ನಿಷೇಧ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣ ತರುವುದನ್ನು ನಿಷೇಧಿಸಲಾಗಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ:

ಫೆ.28: ಕನ್ನಡ, ಅರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.5: ಇತಿಹಾಸ
ಮಾ.6: ಭೌತಶಾಸ್ತ್ರ
ಮಾ.7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ ಭೂಗರ್ಭಶಾಸ್ತ್ರ
ಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ತರ್ಕಶಾಸ್ತ್ರ, ವಿದ್ಮುನ್ಮಾನಶಾಸ್ತ್ರ, ಗೃಹವಿಜ್ಞಾನ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ,
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾ.17: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆ್ಯಂಡ್ ವೆಲ್‌ನೆಸ್

ಇದನ್ನೂ ಓದಿ: ದ್ವಿತೀಯ PUC ಪರೀಕ್ಷೆ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ KSRTC ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ