ETV Bharat / state

ಶಿವಮೊಗ್ಗ: ವೆಜ್ - ನಾನ್​ವೆಜ್ ಫುಡ್‌ಕೋರ್ಟ್‌ಗೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳ‌ ತಂಡ, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ

ಶಿವಮೊಗ್ಗದ ಕೆಲವು ವೆಜ್ ಮತ್ತು ನಾನ್ ವೆಜ್ ಫುಡ್‌ಕೋರ್ಟ್‌ಗೆ ಇಂದು ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

Shivamogga: A team of Sub-Divisional Officers made a surprise visit to the Veg-Non-Veg Food Court
ಫುಡ್‌ಕೋರ್ಟ್‌ಗೆ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳ ತಂಡ (ETV Bharat)
author img

By ETV Bharat Karnataka Team

Published : September 2, 2026 at 4:30 PM IST

1 Min Read
Choose ETV Bharat

ಶಿವಮೊಗ್ಗ : ನಗರದ ಮಲ್ಲಿಕಾರ್ಜುನ ಚಿತ್ರಮಂದಿರದ ಪಕ್ಕದ ಕನ್ಸರ್‌ವೆನ್ಸಿ ಹಾಗೂ ಜೆ.ಪಿ.ಎನ್‌. ರಸ್ತೆಯಲ್ಲಿರುವ ಫುಡ್‌ಕೋರ್ಟ್‌ನಲ್ಲಿ ಪ್ರತಿದಿನ ಸಹಸ್ರಾರು ಸಂಖ್ಯೆಯ ಜನ ಮನಸೆಳೆದ ವೈವಿಧ್ಯಮಯ ಖಾದ್ಯಗಳನ್ನು ಸೇವಿಸುತ್ತಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ತಯಾರಿಕಾ ಸ್ಥಳಗಳನ್ನು ಸ್ವಚ್ಛತೆಯಾಗಿಟ್ಟುಕೊಳ್ಳುವುದು, ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಹಾಗೂ ಶುದ್ಧ ನೀರಿನಿಂದ ಆಹಾರವನ್ನು ತಯಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಫುಡ್‌ಕೋರ್ಟ್​ ಮಾಲೀಕರಿಗೆ ಸೂಚಿಸಿದ್ದಾರೆ.

ಫುಡ್‌ಕೋರ್ಟಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವ ಬಹುತೇಕ ಎಲ್ಲ ಅಂಗಡಿಗಳ ಮಾಲೀಕರಿಗೆ ತಕ್ಷಣವೇ ನೋಟಿಸ್‌ ಜಾರಿಗೊಳಿಸಲು ಸೂಚಿಸಲಾಗಿದೆ. ಮುಂದಿನ 15 ದಿನಗಳೊಳಗಾಗಿ ಎಲ್ಲ ಅಂಗಡಿಗಳ ಮಾಲೀಕರ ಸಭೆ ಕರೆದು, ಸ್ವಚ್ಛತೆ, ಕುಡಿಯುವ ನೀರು ಮತ್ತು ರಾಸಾಯನಿಕಗಳನ್ನು ಬಳಸಿ ಆಹಾರ ತಯಾರಿಕೆ ಮಾಡದಂತೆ ಸೂಚಿಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.

ವೆಜ್ - ನಾನ್​ವೆಜ್ ಫುಡ್‌ಕೋರ್ಟ್‌ಗೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳ‌ ತಂಡ (ETV Bharat)

ಕೆಲವು ಅಂಗಡಿಗಳಲ್ಲಿ ತಯಾರಾದ ಖಾದ್ಯಗಳಲ್ಲಿ ರಾಸಾಯನಿಕಗಳ ಬಳಕೆ ಆಗಿರುವ ಬಗ್ಗೆ ಅನುಮಾನ ಬಂದ ಹಿನ್ನೆಲೆ ಅಂಗಡಿಗಳಲ್ಲಿ ತಯಾರಾದ ಖಾದ್ಯ ತುಣುಕುಗಳ ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಂಡ ಅವರು, ಉತ್ತಮ ಗುಣಮಟ್ಟದ ಎಣ್ಣೆ ಬಳಸಬೇಕು, ಆಹಾರ ತಯಾರಿಕಾ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅಂಗಡಿಗಳ ಮಾಲೀಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್‌, ಕಂದಾಯಾಧಿಕಾರಿ ಸತೀಶ್‌, ದೀಪಕ್‌, ದೊಡ್ಡಬಸಪ್ಪರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ - ಸಿಬ್ಬಂದಿಗಳು ಉಪಸ್ಥಿತರಿದ್ದರು.

Shivamogga: A team of Sub-Divisional Officers made a surprise visit to the Veg-Non-Veg Food Court
ಫುಡ್‌ಕೋರ್ಟ್‌ಗೆ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳ ತಂಡ (ETV Bharat)

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಡಾ. ಮೈತ್ರಿ, ಆಹಾರ ಗುಣಮಟ್ಟ ಕಾಪಾಡುವ ದೃಷ್ಟಿಯಿಂದ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ನಮ್ಮ ಇಲಾಖೆಯ ನಿರ್ದೇಶನ ಹಾಗೂ ಸೂಚನೆಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುವುದನ್ನು ತಿಳಿದುಕೊಳ್ಳಲು ನಮ್ಮ‌ ಅಧಿಕಾರಿಗಳೊಂದಿಗೆ ಭೇಟಿ ನೀಡಲಾಗುತ್ತಿದೆ. ಕಳೆದ ಭಾನುವಾರದಿಂದ ನಮ್ಮ ತಂಡ ಹಲವು ಕಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಆಹಾರ ಗುಟಮಟ್ಟ ಕಾಪಾಡಿಕೊಳ್ಳದವರಿಗೆ ನೋಟಿಸ್ ಜಾರಿ ಮಾಡಲಾಗುತ್ತಿದ್ದು, 15 ದಿನಗಳ‌ ಒಳಗಾಗಿ ಉತ್ತರ ನೀಡಬೇಕೆಂದು ತಿಳಿಸಲಾಗಿದೆ ಎಂದರು.

ಇದನ್ನೂ ಓದಿ: ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ನನ್ನ ಪರಿಚಯಸ್ಥರಿದ್ದರೂ ಬಿಡಲ್ಲ: ಸಚಿವ ಯು. ಟಿ. ಖಾದರ್ ಎಚ್ಚರಿಕೆ