ETV Bharat / state

ಪ್ರೀತಿಸಿದ ಯುವತಿಗೆ ಬೇರೆಯವರ ಜೊತೆ ನಿಶ್ಚಿತಾರ್ಥ: ಬೈಕ್​ಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

ಯುವತಿಗೆ ನಿಶ್ಚಿತಾರ್ಥವಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ, ಆಕೆಯ ಹುಡಗನ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ.

SHIVAMOGGA  JILTED LOVER CASE  BIKE FIRE  ಭಗ್ನ ಪ್ರೇಮಿಯಿಂದ ಬೈಕ್​ ಬೆಂಕಿ
ಬೈಕ್​ಗೆ ಬೆಂಕಿ ಹಚ್ಚಿದ ಯುವಕ (ETV Bharat)
author img

By ETV Bharat Karnataka Team

Published : August 31, 2026 at 5:14 PM IST

1 Min Read
Choose ETV Bharat

ಶಿವಮೊಗ್ಗ: ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್​ಗೆ ಪಾಗಲ್ ಪ್ರೇಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾನು ಪ್ರೀತಿಸಿದ್ದ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂಬ ಕೋಪದಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ.

ಮಂಡ್ಯ ಜಿಲ್ಲೆಯ ಮಣಿಕಂಠ ಬೈಕ್​ಗೆ ಬೆಂಕಿ ಹಚ್ಚಿದ ಆರೋಪಿ. ಈತ ಕಳೆದ ರಾತ್ರಿ ಶಿವಮೊಗ್ಗದ ವೆಂಕಟೇಶ ನಗರದ ತುಂಗಾ ಕಾಲುವೆ ಮುಂದೆ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಬೈಕ್ ಮಾಲೀಕ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಬೈಕ್​ಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ (ETV Bharat)

ದೂರಿನ ಅನ್ವಯ ಪೊಲೀಸರು ತನಿಖೆ ಪ್ರಾರಂಭಿಸಿ, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಮಣಿಕಂಠ ಕೃತ್ಯ ಎಸಗಿರುವುದು ತಿಳಿದು ಬಂದಿದೆ. ಸದ್ಯ ಮಣಿಕಂಠನನ್ನು ಬಂಧಿಸಲಾಗಿದೆ ಎಂದು ಜಯನಗರ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಣಿಕಂಠ ಮೂಲತಃ ಮಂಡ್ಯ ಜಿಲ್ಲೆ ನಿವಾಸಿ. ಈತನಿಗೆ ಇನ್​ಸ್ಟಾಗ್ರಾಮ್​ನಲ್ಲಿ‌ ಶಿವಮೊಗ್ಗದ ಯುವತಿಯ ಪರಿಚಯವಾಗಿತ್ತು. ಇದರಿಂದ‌ ಮಣಿಕಂಠ ಶಿವಮೊಗ್ಗಕ್ಕೆ ಬಂದು ಇಲ್ಲಿಯೇ ನೆಲೆಸಿದ್ದ. ಆದರೆ, ಇತ್ತಿಚೇಗೆ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಕೂಡ ನಡೆದಿತ್ತು. ಇದರಿಂದ‌ ಕೋಪಗೊಂಡ ಮಣಿಕಂಠ ಕುಡಿದು ಯುವತಿ ಮನೆ ಮುಂದೆ ಬಂದು ಅಲ್ಲಿ ನಿಲ್ಲಿಸಿದ್ದ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಬೆಂಕಿ ಪಕ್ಕದಲ್ಲಿದ್ದ ಯುವತಿಯ ಸಹೋದರನ ಬೈಕ್​ಗೂ ತಗುಲಿದೆ. ಇದರಿಂದ ಎರಡು ಬೈಕ್​ಗಳು ಭಾಗಶಃ ಸುಟ್ಟಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರೀತಿಸುವಂತೆ ಅಪ್ರಾಪ್ತೆಯ ಮೇಲೆ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು