ETV Bharat / state

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ; ವಿದ್ಯಾರ್ಥಿಗಳಿಗೆ ಪ್ರವಾಸದ ಸಂತಸ

ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು.

students-from-muthigepura-government-higher-primary-school-in-mudigere-taluk-were-taken-on-a-trip-by-plane
ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ತೆರಳಿದ್ದ ವಿದ್ಯಾರ್ಥಿಗಳು (ETV Bharat)
author img

By ETV Bharat Karnataka Team

Published : January 11, 2026 at 2:18 PM IST

2 Min Read
Choose ETV Bharat

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರೆದೊಯ್ದು ಶೈಕ್ಷಣಿಕ ಪ್ರವಾಸ ಮಾಡಿಸಲಾಗಿದೆ. ಈ ಮೂಲಕ ಖಾಸಗಿ ಶಾಲೆಗಳಿಗೆ ತಾವೇನು ಕಮ್ಮಿ ಇಲ್ಲ ಎಂಬಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಂಭ್ರಮಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆ ಅಂದ್ರೆ ಅಸಡ್ಡೆ ತೋರುವವರೇ ಹೆಚ್ಚು. ಹೀಗಾಗಿ, ಮಲೆನಾಡ ಇತಿಹಾಸದಲ್ಲಿ ಸರ್ಕಾರಿ ಶಾಲೆಯೊಂದು ಹೈಟೆಕ್ ಆಗಿ ವಿಮಾನದಲ್ಲಿ ಪ್ರವಾಸ ಹೊರಟು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿದೆ.

ಪ್ರವಾಸದ ಕುರಿತು ವಿದ್ಯಾರ್ಥಿನಿಯರು ಸಂತಸ ಹಂಚಿಕೊಂಡರು. (ETV Bharat)

ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವ ಕಾರ್ಯ ಮಾಡಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಮನ ಸೆಳೆದಿದೆ.

ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯಾಣದ ಅವಕಾಶ ದೊರಕಿರುವುದು ವಿಶೇಷವಾಗಿದೆ. ಖಾಸಗಿ ಶಾಲೆಗಳಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ, ಶೈಕ್ಷಣಿಕ ಸೌಲಭ್ಯಗಳು ಸೇರಿದಂತೆ ಇಲ್ಲಿನ ವಾತಾವರಣವನ್ನು ಈ ಸರ್ಕಾರಿ ಶಾಲೆಯಲ್ಲೇ ಒದಗಿಸಲಾಗುತ್ತಿದೆ.

Muthigepura-government-higher-primary-school
ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ETV Bharat)

ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸುವಲ್ಲಿ ಸ್ಥಳೀಯ ಗ್ರಾಮ ಪಂಚಾಯತ್​, ಎಸ್‍ಡಿಎಂಸಿ ಸದಸ್ಯರು, ದಾನಿಗಳು ಹಾಗೂ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಹಕಾರ ಮತ್ತು ಸಮರ್ಪಿತ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

students-from-muthigepura-government-higher-primary-school-in-mudigere-taluk-were-taken-on-a-trip-by-plane
ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ETV Bharat)

ಇತ್ತೀಚಿಗೆ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳ ಸಂತಸಕ್ಕೆ ಮಿತಿಯೇ ಇರಲಿಲ್ಲ. ವಿಮಾನ ಪ್ರಯಾಣದ ಅನುಭವವು ಮಕ್ಕಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಭವಿಷ್ಯದ ಕನಸುಗಳನ್ನು ಬಿತ್ತುವಲ್ಲಿ ಸಹಕಾರಿಯಾಗಲಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 30 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದಾರೆ. ಚಿಕ್ಕಮಗಳೂರಿನಿಂದ ಬುಧವಾರ(ಜನವರಿ 7) ಶಿವಮೊಗ್ಗಕ್ಕೆ ಬಸ್​​ನಲ್ಲಿ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡಿದ್ದಾರೆ. ಶಾಲಾ ಎಸ್‍ಡಿಎಂಸಿ ಸದಸ್ಯರು ಹಾಗೂ ದಾನಿಗಳ ನೆರವಿನಿಂದ ಈ ಪ್ರವಾಸ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ವಿಧಾನಸೌಧ, ವಿಮಾನ ನಿಲ್ದಾಣವನ್ನು ತೋರಿಸಿ ಅಲ್ಲಿಂದ ಬಸ್​​ನ ಮೂಲಕ ಚಿಕ್ಕಮಗಳೂರಿಗೆ ವಾಪಸ್ ಆಗಿದ್ದಾರೆ.

students-from-muthigepura-government-higher-primary-school-in-mudigere-taluk-were-taken-on-a-trip-by-plane
ಶಾಲಾ ಪ್ರವಾಸಕ್ಕೆ ವಿಮಾನದಲ್ಲಿ ತೆರಳಿದ್ದ ವಿದ್ಯಾರ್ಥಿಗಳು (ETV Bharat)

ರಾಜ್ಯವೇ ಹೆಮ್ಮೆಪಡುವಂತಹ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ: ಮುದ್ರೆ ಮನೆ ಕಾಫಿ ಕ್ಯೂರಿಂಗ್ ಮಾಲೀಕ ಬಿ. ಎಸ್. ಸಂತೋಷ್ ಸಹಕಾರದಿಂದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಈ ಶಾಲೆ ಇಡೀ ರಾಜ್ಯವೇ ಹೆಮ್ಮೆಪಡುವಂತೆ ಮಾದರಿಯಾಗಿ ಹೊರಹೊಮ್ಮಿದೆ. ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಈ ಸಾಧನೆ ಸರ್ಕಾರಿ ಶಾಲೆಗಳ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಇದನ್ನೂ ಓದಿ : ಸ್ವಾತಂತ್ರ್ಯಪೂರ್ವದಲ್ಲಿ ಹೆಣ್ಣು‌ಮಕ್ಕಳ ಶಿಕ್ಷಣಕ್ಕಾಗಿ ಪ್ರಾರಂಭವಾದ ಶಾಲೆಗೆ ಶತಮಾನೋತ್ಸವ ಸಂಭ್ರಮ