ETV Bharat / state

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಆದೇಶ

ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಸಚಿವ ಜೋಶಿ ಅವರು ಮನವಿ ಮಾಡಿದ್ದರು.

DHARAWAD  MINISTER PRALHAD JOSHI  MINISTER ASHWINI VAISHNAV  ಧಾರವಾಡ ಆಕಾಶವಾಣಿ ಕೇಂದ್ರ  DHARWAD ALL INDIA RADIO STATION
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (ANI)
author img

By ETV Bharat Karnataka Team

Published : April 22, 2026 at 7:14 PM IST

1 Min Read
Choose ETV Bharat

ನವದೆಹಲಿ/ಹುಬ್ಬಳ್ಳಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರದ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕದ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಯಲಿದೆ.

ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಲ್ಹಾದ ಜೋಶಿ ಅವರ ಮನವಿಯ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ, ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.

ಸಚಿವ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್​ ಸಾಮರ್ಥ್ಯದ FM ಪ್ರೇಷಕ ಅಳವಡಿಕೆ