ETV Bharat / state

ರೋಗಿಯಿದ್ದ ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ರಸ್ತೆಯಲ್ಲಿ ವ್ಹೀಲಿಂಗ್​ನಲ್ಲಿ ತೊಡಗಿದ ಯುವಕರು!

ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟುಕೊಡದೇ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತ ಯುವಕರು ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

youth-engaged-in-wheeling-on-the-road-without-giving-way-to-ambulance
ವೈರಲ್​ ವಿಡಿಯೋ ದೃಶ್ಯ (Viral Video)
author img

By ETV Bharat Karnataka Team

Published : July 6, 2026 at 3:58 PM IST

1 Min Read
Choose ETV Bharat

ಬೆಂಗಳೂರು: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಯುವಕರ ಗುಂಪೊಂದು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೂನ್ 4 ರಂದು ತುಮಕೂರು ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ಆಂಬ್ಯುಲೆನ್ಸ್​ನೊಳಗಿದ್ದ ವ್ಯಕ್ತಿಯೊಬ್ಬರು ಈ ದೃಶ್ಯಗಳನ್ನ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಆರೋಗ್ಯ ಕವಚ (108) ಆಂಬ್ಯುಲೆನ್ಸ್ ಸೇವೆ ವಿಳಂಬದಿಂದ ಸಂಭವಿಸುವ ಸಾವುಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡಿದ 15 ನಿಮಿಷದೊಳಗೆ ಆಂಬ್ಯುಲೆನ್ಸ್ ಸ್ಥಳ ತಲುಪದಿದ್ದರೆ ಅದರ ಚಾಲಕನಿಗೆ 5 ಸಾವಿರ ರೂಪಾಯಿ ದಂಡ ವಿಧಿಸುವ ನಿಯಮವೊಂದನ್ನ ಜಾರಿಗೆ ತರಲು ಸರ್ಕಾರ ನಿಯಮ ರೂಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯುವಕರು ಆಂಬ್ಯುಲೆನ್ಸ್​ಗೆ ದಾರಿ ಮಾಡಿಕೊಡದೇ ದುರ್ವರ್ತನೆ ತೋರಿದ್ದಾರೆ.

ಐದಾರು ಯುವಕರಿಂದ ವ್ಹೀಲಿಂಗ್: ​ರೋಗಿಯೊಬ್ಬರನ್ನು ತುಮಕೂರು ರಸ್ತೆ ಮೂಲಕ ಆಂಬ್ಯುಲೆನ್ಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದಿದ್ದರಿಂದ ಆಂಬ್ಯುಲೆನ್ಸ್​ ಸೈರನ್ ಮೊಳಗಿಸಿಕೊಂಡು ತೆರಳುತ್ತಿದ್ದರೂ ಸಹ ಮುಂದೆ ದ್ವಿಚಕ್ರ ವಾಹನಗಳಲ್ಲಿದ್ದ ಐದಾರು ಯುವಕರು ರಸ್ತೆಯಲ್ಲಿ ವ್ಹೀಲಿಂಗ್ ಮುಂದುವರೆಸಿದ್ದಾರೆ.

ಯುವಕರ ಗುಂಪಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಗೊರಗುಂಟೆಪಾಳ್ಯದಿಂದ ಯಶವಂತಪುರದವರೆಗೂ ದಾರಿ ಬಿಡದೇ ಯುವಕರ ಗುಂಪು ಪುಂಡಾಟ ಪ್ರದರ್ಶಿಸಿದೆ ಎಂದು ಆರೋಪಿಸಲಾಗಿದೆ. ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತುರ್ತು ಸೇವೆಗಳಿಗೆ ಅಡ್ಡಿಪಡಿಸಿದ ಆರೋಪಿಗಳ ವಾಹನಗಳನ್ನ ಜಪ್ತಿಗೊಳಿಸಿ, ಚಾಲನಾ ಪರವಾನಗಿ ರದ್ದುಗೊಳಿಸಬೇಕು. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಘಟನೆಯ ವಿಡಿಯೋ ಹಾಗೂ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಆರೋಪಿಗಳ ಪತ್ತೆಕಾರ್ಯ ಮುಂದುವರೆಸಲಾಗಿದೆ ಎಂದು‌ ಯಶವಂತಪುರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶು ಪತ್ತೆ! ಬಸ್ ನಿಲ್ದಾಣದಲ್ಲಿ ಘಟನೆ