ಚಿಕ್ಕಮಗಳೂರು: ಬೆಂಕಿ ತಗುಲಿ ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಸರ್ಕಾರಿ ಬಸ್; ವಿಡಿಯೋ - BUS CAUGHT FIRE
🎬 Watch Now: Feature Video

Published : March 3, 2026 at 8:10 PM IST
ಚಿಕ್ಕಮಗಳೂರು: ಐಷಾರಾಮಿ ಹಾಗೂ ಲಾಂಗ್ ರೂಟ್, ಸ್ಲೀಪರ್ ಕೋಚ್ ಬಸ್ಗಳಲ್ಲಿ ಸಾಮಾನ್ಯವಾಗಿ ಬೆಂಕಿ ಅವಘಡ ಸಂಭವಿಸಿದಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆಗಳನ್ನು ನೋಡಿದ್ದೇವೆ. ಆದರೆ, ಸರ್ಕಾರಿ ಕೆಂಪು ಬಸ್ಸಿಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಜೂನಿಯರ್ ಕಾಲೇಜಿನ ಸಮೀಪದ ಬೇಲೂರು ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದನ್ನು ನೋಡಿದ ಬಸ್ನ ಚಾಲಕ ಹಾಗೂ ನಿರ್ವಾಹಕ ಕೂಡಲೇ ಎಚ್ಚರಗೊಂಡಿದ್ದಾರೆ. ಕೂಡಲೇ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಪ್ರಯಾಣಿಕರು ಹಾಗೂ ಮಹಿಳೆಯರನ್ನು ಬಸ್ನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಸ್ ಧಗಧಗನೆ ಹೊತ್ತಿ ಉರಿಯಲು ಪ್ರಾರಂಭಿಸಿದೆ.
ಬಸ್ಗೆ ಬೆಂಕಿ ಬಿದ್ದು ರಸ್ತೆ ತುಂಬಾ ದಟ್ಟ ಹೊಗೆ ಆವರಿಸುತ್ತಿದ್ದಂತೆ ಕೂಡಲೇ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನೆ ಮಾಡಿದ್ದಾರೆ. ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಬಸ್ನಲ್ಲಿನ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾದರು.
ಸಿಬ್ಬಂದಿ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ಉರಿಯಲು ಪ್ರಾರಂಭಿಸಿತು. ಹೀಗಾಗಿ, ಸುತ್ತಮುತ್ತ ನೆರೆದಿದ್ದ ಜನರಿಗೆ ಆತಂಕ ಉಂಟಾಯಿತು. ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು: ಹಾರ್ಡ್‌ವೇರ್ ಗೋದಾಮಿನಲ್ಲಿ ಅಗ್ನಿ ಅವಘಡ - FIRE BREAKS OUT IN HARDWARE SHOP