ಕಾಂಪೌಂಡ್ ಮೇಲೆ ಕುಳಿತಿದ್ದ 10 ಅಡಿ ಕಾಳಿಂಗ ಸರ್ಪ ಸೆರೆ!
🎬 Watch Now: Feature Video

Published : August 31, 2026 at 5:13 PM IST
ಕಾರವಾರ: ತಾಲೂಕಿನ ಮಲ್ಲಾಪುರ ಸಮೀಪದ ಕುರ್ನಿಪೇಟೆಯಲ್ಲಿ ಸಾರ್ವಜನಿಕ ಸ್ಥಳದ ಕಾಂಪೌಂಡ್ ಗೋಡೆ ಮೇಲೆ ಕುಳಿತಿದ್ದ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.
ಸಾರ್ವಜನಿಕ ಜಾಗದ ಕಾಂಪೌಂಡ್ ಮೇಲೆ ಬೃಹತ್ ಗಾತ್ರದ ಕಾಳಿಂಗ ಸರ್ಪ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ವಿಷಕಾರಿ ಹಾವು ಕಂಡು ಜನರು ಆತಂಕಕ್ಕೊಳಗಾಗಿದ್ದು, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಬಿಲಾಲ್ ಶೇಖ್ ಮತ್ತು ರಾಯಪ್ಪ ಸ್ಥಳೀಯರ ಸಹಕಾರದೊಂದಿಗೆ ಯಾವುದೇ ಅನಾಹುತ ಸಂಭವಿಸದಂತೆ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿದ್ದಾರೆ.
ಕಾಳಿಂಗ ಸರ್ಪ ಹಿಡಿಯುವ ದೃಶ್ಯವನ್ನು ವೀಕ್ಷಿಸಲು ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸೆರೆ ಹಿಡಿದ ಹಾವನ್ನು ಬಳಿಕ ದಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಿಡಲಾಯಿತು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಆಹಾರ ಅರಸಿ ಕಾಳಿಂಗ ಸರ್ಪಗಳು ಜನವಸತಿ ಪ್ರದೇಶಕ್ಕೆ ಬರುವುದು ಸಾಮಾನ್ಯ, ಹಾವು ಕಂಡುಬಂದಲ್ಲಿ ಹೊಡೆಯಲು ಮುಂದಾಗದೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಇದೇ ವೇಳೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮೂಢನಂಬಿಕೆ: ಹಾವು ಕಚ್ಚಿದ ಯುವತಿಗೆ ಬೇವಿನ ಎಲೆಗಳಿಂದ ಮಂತ್ರ ಚಿಕಿತ್ಸೆ ಮಾಡಿದ ವ್ಯಕ್ತಿ!