Watch video: ಬೃಹತ್​​​​ ಗಾತ್ರದ ಹೆಬ್ಬಾವು ಸೆರ; ಅರಣ್ಯ ಇಲಾಖೆಯಿಂದ ರಕ್ಷಣೆ - PYTHON CAPTURED

🎬 Watch Now: Feature Video

thumbnail
ಹೆಬ್ಬಾವು ಸೆರೆ (ETV Bharat)

By ETV Bharat Karnataka Team

Published : July 15, 2026 at 4:10 PM IST

1 Min Read
Choose ETV Bharat

ಬಳ್ಳಾರಿ: ಸಂಡೂರು ತಾಲೂಕಿನ ಯಶವಂತನಗರ ಗ್ರಾಮದ ಜನರ ನಿದ್ದೆಗೆಡಿಸಿದ್ದ ಬೃಹತ್​​​​ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಜನವಸತಿ ಪ್ರದೇಶದ ಸಮೀಪ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು) ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೆಬ್ಬಾವು ವಿಷರಹಿತವಾಗಿದ್ದರೂ ಅದರ ಗಾತ್ರ ದೊಡ್ಡದಿರುವುದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಳೆಗಾಲದಲ್ಲಿ ಆಹಾರ ಅರಸಿ ಹಾವುಗಳು ಜನವಸತಿ ಪ್ರದೇಶಗಳಿಗೆ ಬರುವುದು ಸಾಮಾನ್ಯ. ಹೀಗಾಗಿ ಆತಂಕ ಪಡುವ ಬದಲು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ: ಇದೇ ವಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಬಳಿಯ ಗೌಡಹಳ್ಳಿ ಗ್ರಾಮದಲ್ಲಿ 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಖ್ಯಾತ ಉರಗ ರಕ್ಷಕ ಸ್ನೇಕ್ ಮೊಹಮದ್ ಸ್ಥಳಕ್ಕೆ ಆಗಮಿಸಿ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಸರ್ಪದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. 

ಇದನ್ನೂ ಓದಿ: ಒಂದೂರಲ್ಲಿ ಚಿರತೆ ಸೆರೆ ಮತ್ತೊಂದೂರಲ್ಲಿ ಸೈರನ್​ ಸದ್ದಿಗೆ ಚಿರತೆ ಪರಾರಿ