ಬೇಟೆಯಾಡಲು ಮನೆ ಆವರಣಕ್ಕೆ ನುಗ್ಗಿದ ಚಿರತೆ, ನಾಯಿ ಕೂಗಾಟಕ್ಕೆ ಹೆದರಿ ಪರಾರಿ: ಸಿಸಿಟಿವಿ ದೃಶ್ಯ - WILD ANIMALS
🎬 Watch Now: Feature Video

Published : June 12, 2026 at 8:07 PM IST
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಗುಡ್ಡೆ ತೋಟ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಧ್ಯ ರಾತ್ರಿ ವೇಳೆ ಚಿರತೆಯೊಂದು ಮನೆ ಸಮೀಪಕ್ಕೆ ಬಂದು ಶ್ವಾನವನ್ನು ಬೇಟೆಯಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಗುಡ್ಡೆ ತೋಟ ಗ್ರಾಮದ ನಿವಾಸಿ ನಟರಾಜ್ ಅವರ ಮನೆ ಆವರಣಕ್ಕೆ ಚಿರತೆ ನುಗ್ಗಿರುವುದು ಸಿಸಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ಮನೆಯ ಸುತ್ತಮುತ್ತ ಸಂಚರಿಸಿದ ಚಿರತೆ, ಮನೆಯ ಬಳಿ ಇದ್ದ ಶ್ವಾನವನ್ನು ಗುರಿಯಾಗಿಸಿಕೊಂಡು ಹೊಂಚು ಹಾಕಿದೆ. ಆದರೆ, ಶ್ವಾನ ಜೋರಾಗಿ ಬೊಗಳಲು ಆರಂಭಿಸಿದ ಹಿನ್ನೆಲೆಯಲ್ಲಿ ಚಿರತೆ ಗಾಬರಿಗೊಂಡು ಅಲ್ಲಿಂದ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
ಮರುದಿನ ಬೆಳಗ್ಗೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ವೇಳೆ ಮನೆಗೆ ಚಿರತೆ ಬಂದಿರುವುದು ದೃಢಪಟ್ಟಿದೆ. ಈ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ತಮ್ಮ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಗ್ರಾಮದ ತೋಟಗಳು ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಚಿರತೆಯ ಓಡಾಟ ಕಂಡು ಬರುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಲ್ಲಿ ಚಿರತೆಯ ಓಡಾಟ ಹೆಚ್ಚಾಗಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ರೈತರು ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಹೊರ ಸಂಚಾರ ನಡೆಸಲು ಭಯ ಪಡುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿ ಕೊಂಡಿದ್ದಾರೆ.
ಚಿರತೆ ಮಾನವ ವಸತಿ ಪ್ರದೇಶಗಳಿಗೆ ಆಗಾಗ್ಗೆ ಬರುತ್ತಿರುವುದರಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಇದನ್ನೂ ಓದಿ: ಮೈಸೂರು: ಮಾಜಿ ಶಾಸಕನ ತಂದೆಯ ಜಮೀನಿನಲ್ಲಿ ಹುಲಿ ಸೆರೆ; ಜನರನ್ನು ಕಂಡು ಘರ್ಜನೆ