ಚಾಮುಂಡಿ ಬೆಟ್ಟದ ಗ್ರಾಮದಲ್ಲಿ ಚಿರತೆ ಓಡಾಟ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

🎬 Watch Now: Feature Video

thumbnail
ಚಾಮುಂಡಿ ಬೆಟ್ಟದ ಗ್ರಾಮದಲ್ಲಿ ಚಿರತೆ ಓಡಾಟ (ETV Bharat)

By ETV Bharat Karnataka Team

Published : August 10, 2026 at 3:20 PM IST

1 Min Read
Choose ETV Bharat

ಮೈಸೂರು: ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಪಕ್ಕದ ಗ್ರಾಮದಲ್ಲಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಚಿರತೆ ಬೀದಿ ನಾಯಿಗಳನ್ನು ಬೇಟೆಯಾಡಲು ಸಮೀಪದ ಚಾಮುಂಡಿಬೆಟ್ಟ ಗ್ರಾಮದ ನಾಯಕರ ಬೀದಿಯ ಮಾರಮ್ಮ ದೇವಾಲಯದ ಬಳಿ ಓಡಾಡುತ್ತಿತ್ತು. ನಾಯಕರ ಬೀದಿಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ನೋಡಿದ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಭಾನುವಾರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆಗೆ ಬೋನ್ ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

''ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಚಿರತೆಗಳು ಇರಬಹುದು. ಚಾಮುಂಡಿ ದೇವಾಲಯಕ್ಕೆ ಹೊಂದಿಕೊಂಡಿರುವಂತಹ ಚಾಮುಂಡಿ ಗ್ರಾಮದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ಬಂದಿದ್ದು, ಪರಿಶೀಲನೆ ನಡೆಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ'' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ 'ಈಟಿವಿ ಭಾರತ'ಕ್ಕೆ ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ.

ಇವುಗಳನ್ನೂ ಓದಿ: